ನವಲಗುಂದ : ಕಡಲೆ ಖರೀದಿ ಕೇಂದ್ರ ಪ್ರಾರಂಭಿಸಲು ಕಾಂಗ್ರೆಸ್ ಪಕ್ಷದ ವತಿಯಿಂದ ಮಂಗಳವಾರ ಪಟ್ಟಣದ ಕಾಂಗ್ರೆಸ್ ಭವನದಿಂದ ತಾಲೂಕಾ ಕಚೇರಿಯವರೆಗೆ ಪಾದಯಾತ್ರೆ ಮೂಲಕ ಆಗಮಿಸಿ, ತಹಶೀಲ್ದಾರ ಪ್ರವೀಣ ಹುಚ್ಚಣ್ಣವರ ಮೂಲಕ ಮನವಿಯನ್ನು ಸಲ್ಲಿಸಲಾಯಿತು.
ಹೌದು ರೈತರು ಬೆಳೆದ ಎಲ್ಲಾ ಕಡಲೆ ಬೆಳೆಯನ್ನು ಮತ್ತು ಕನಿಷ್ಠ 25 ಕ್ಷಿಂಟಲ್ ಪ್ರತಿ ರೈತರಿಂದ ಕಡಲೆ ಖರೀದಿಸಬೇಕು. ಕೂಡಲೇ ಜಿಲ್ಲಾಧಿಕಾರಿಗಳು ಖರೀದಿ ಕೇಂದ್ರದ ದಿನಾಂಕವನ್ನು ಘೋಷಿಸಿ, ಎಲ್ಲಾ ಕಡೆ ಖರೀದಿ ಕೇಂದ್ರ ಪ್ರಾರಂಭಿಸಬೇಕು ಎಂದು ನವಲಗುಂದ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ವತಿಯಿಂದ ಒತ್ತಾಯಿಸಲಾಯಿತು.
ಈ ಸಂಧರ್ಭದಲ್ಲಿ ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ, ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ, ಮಾಜಿ ಸಚಿವ ಕೆ ಎನ್ ಗಡ್ಡಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಿವಾನಂದ ಕರಿಗಾರ ಸೇರಿದಂತೆ ಹಲವು ಮುಖಂಡರು ಇದ್ದರು.
Kshetra Samachara
15/02/2022 05:17 pm