ಕುಂದಗೋಳ: ಈ ಬಾರಿಯ ಅತಿವೃಷ್ಟಿ ಪರಿಣಾಮ ಕುಂದಗೋಳ ತಾಲೂಕಿನ ರೈತರು ಬೆಳೆದ ಮುಂಗಾರು ಬೆಳೆ ಸಂಪೂರ್ಣ ಹಾನಿಯಾಗಿರುವುದು ನೋವಿನ ಸಂಗತಿ. ಹಿಂಗಾರು ಕಡಲೆ ಬೆಳೆ ಚೆನ್ನಾಗಿ ಬಂದಿದ್ದು, ಆ ಬೆಳೆಗೆ ಬೆಂಬಲ ಬೆಲೆ ನೀಡಲು ಸರ್ಕಾರ ಕಡಲೆ ಖರೀದಿ ಆರಂಭಿಸಿರುವುದು ಸಂತಸದ ವಿಷಯ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದ್ದಾರೆ.
ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 'ಕಡಲೆ ಖರೀದಿ ಕೇಂದ್ರ ಆರಂಭ' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು, ಕ್ವಿಂಟಾಲ್ ಕಡಲೆಗೆ ಖರೀದಿಗೆ 5230 ರೂಪಾಯಿ ಬೆಂಬಲ ನೀಡುತ್ತಿದೆ. ಈ ಯೋಜನೆಯನ್ನು ಎಲ್ಲಾ ರೈತರು ಸದುಪಯೋಗ ಪಡೆದುಕೊಳ್ಳಬೇಕು' ಎಂದರು.
ಈ ಸಂದರ್ಭದಲ್ಲಿ ಯರಗುಪ್ಪಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಸರ್ವ ಸದಸ್ಯರು ಹಾಗೂ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಮಂಡಳಿ ಸದಸ್ಯರು ರೈತರು ಉಪಸ್ಥಿತರಿದ್ದರು.
Kshetra Samachara
28/02/2022 06:15 pm