ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ರೈತರ ಸಮಸ್ಯೆ ಬಗೆಹರಿಸಿ: ಸರ್ಕಾರಕ್ಕೆ ಒತ್ತಾಯ

ಧಾರವಾಡ: ರಾಜ್ಯದ ರೈತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈವರೆಗೂ ಅನೇಕರಿಗೆ ಬೆಳೆ ವಿಮೆ, ಬೆಳೆ ಪರಿಹಾರ ಸಿಕ್ಕಿಲ್ಲ. ನವಲಗುಂದ  ತಾಲೂಕಿನ ರೈತರು ಅತಿವೃಷ್ಟಿಯಿಂದಾಗಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು, ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕು ಎಂದು ರೈತ ಮುಖಂಡ ಮಲ್ಲಿಕಾರ್ಜುನ ಬಾಳನಗೌಡರ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಯಡಿಯೂರಪ್ಪನವರು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಸಾಲಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ, ಅಧಿಕಾರ ಸಿಕ್ಕ ನಂತರ ರೈತರನ್ನು ಕಡೆಗಣಿಸಲಾಗುತ್ತಿದೆ.  ಯಾವುದೇ ಚರ್ಚೆಯಿಲ್ಲದೆ ತಮ್ಮ ವೇತನ ಮತ್ತು ಭತ್ಯೆ ಹೆಚ್ಚಿಸಿಕೊಂಡಿರುವ ರಾಜಕಾರಣಿಗಳು, ರೈತರಿಗೆ ಅನ್ಯಾಯ ಎಸಗಿದ್ದಾರೆ ಎಂದು ಆರೋಪಿಸಿದರು.

ಬೆಳೆ ವಿಮೆ ಮತ್ತು ಪರಿಹಾರ ಒದಗಿಸುವಲ್ಲಿ ಬೇಜವಾಬ್ದಾರಿಯಿಂದ ವರ್ತಿಸುತ್ತಿರುವ ಅಧಿಕಾರಿಗಳು, ರೈತರನ್ನು ನಿರ್ಲಕ್ಷಿಸುತ್ತಿದ್ದಾರೆ. ಓರ್ವ ರೈತನಿಂದ 15 ಕ್ವಿಂಟಾಲ್ ಕಡಲೆ ಖರೀದಿಸಲು ಸರ್ಕಾರ ನಿಯಮ ರೂಪಿಸಿದೆ. ಆದರೆ, ಅಧಿಕಾರಿಗಳು ಕಡಲೆ ಬೀಜ ಸರಿಯಿಲ್ಲ ಎಂಬ ಸಬೂಬು ನೀಡಿ ವಾಪಸ್ ಕಳುಹಿಸುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಸರ್ಕಾರ ಗಮನಹರಿಸಿ, ಕಡಲೆ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Edited By : Nagesh Gaonkar
Kshetra Samachara

Kshetra Samachara

18/04/2022 10:22 pm

Cinque Terre

30.25 K

Cinque Terre

0

ಸಂಬಂಧಿತ ಸುದ್ದಿ