ನವಲಗುಂದ: ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಧಾರವಾಡದಲ್ಲಿ ಬೆಳ್ಳಂ ಬೆಳಿಗ್ಗೆ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ ಹಿನ್ನೆಲೆ ಗುರುವಾರ ನವಲಗುಂದದಲ್ಲಿ ಕಾಂಗ್ರೇಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಲಿಂಗರಾಜ ವೃತ್ತದ ರೈತ ಭವನ ಎದುರು ರಸ್ತೆ ತಡೆದು ನಡೆಸಿದ ಪ್ರತಿಭಟನೆಯಲ್ಲಿ ಬಿಜೆಪಿ ಸರ್ಕಾರವೂ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಮೊದಲಿಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಈಗಾ ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನು ಜೈಲಿಗೆ ಕಳಿಸೋ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೇಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು...
Kshetra Samachara
05/11/2020 03:23 pm