ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ವಿನಯ್ ಕುಲಕರ್ಣಿ ಬಂಧನದ ಹಿಂದೆ ರಾಜಕಾರಣಿಗಳ ಕೈವಾಡವಿದೆ'

ಬೆಂಗಳೂರು: ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಬಂಧನದ ಹಿಂದೆ ರಾಜಕಾರಣಿಗಳ ಕೈವಾಡವಿದೆ ಎಂದು ಲಿಂಗಾಯತ ಪಂಚಮಸಾಲಿ ಮಠದ ಜಯಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀಗಳು, 'ಲಿಂಗಾಯತ ಸಮಾಜಿದ ಮುಖಂಡ ವಿನಯ್ ಕುಲಕುರ್ಣಿ ಅವರನ್ನು ಸಿಬಿಐ ಪೊಲೀಸರು ಬಂಧಿಸಿರುವುದು ಖಂಡನೀಯ. ಕನಿಷ್ಠ ನೋಟಿಸ್ ನೀಡದೆ ಬಂಧಿಸಲಾಗಿದೆ. ಚುನಾವಣೆ ಸಂದರ್ಭದಲ್ಲಿ ಕೇವಲ ನಮ್ಮ ಜನಾಂಗವನ್ನು ಬಳಕೆ ಮಾಡಿಕೊಳ್ಳುವ ಪವೃತ್ತಿಯನ್ನು ರಾಜಕೀಯ ನಾಯಕರು ಬೆಳೆಸಿಕೊಂಡಿದ್ದಾರೆ. ಯೋಗಿಶ್ ಗೌಡ ಕೊಲೆ ಪ್ರಕರಣದಲ್ಲಿ ಅಪರಾಧಿ ಅಲ್ಲದಿದ್ದರೂ ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸುವುದು ಸರಿಯಲ್ಲ' ಎಂದು ಹೇಳಿದ್ದಾರೆ.

ನಮ್ಮ ಇಡೀ ಸಮುದಾಯ, ಪಂಚಾಮಸಾಲಿ ಮಠ ವಿನಯ್ ಅವರೊಂದಿಗಿದೆ. ಧಾರವಾಡದ ಜನರಿಗೆ ವಿನಯ್ ಕುಲಕರ್ಣಿ ಏನು ಎಂದು ಗೊತ್ತಿದೆ. ಅವರನ್ನು ರಾಜಕೀಯವಾಗಿ ಹತ್ತಿಕ್ಕುವ ಪ್ರಯತ್ನ ನಡೆಸಿರುವುದು ಸರಿಯಲ್ಲ ಎಂದರು.

Edited By : Vijay Kumar
Kshetra Samachara

Kshetra Samachara

05/11/2020 04:27 pm

Cinque Terre

72.25 K

Cinque Terre

17

ಸಂಬಂಧಿತ ಸುದ್ದಿ