ಧಾರವಾಡ: ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಇದೀಗ ಅಧಿಕೃತವಾಗಿ ಬಂಧಿಸಿದ್ದಾರೆ.
ಬೆಳ್ಳಂಬೆಳಿಗ್ಗೆ ವಿನಯ ಕುಲಕರ್ಣಿ ಹಾಗೂ ಅವರ ಸಹೋದರ ವಿಜಯ ಕುಲಕರ್ಣಿ ಅವರನ್ನು ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದಿದ್ದ ಸಿಬಿಐ ಅಧಿಕಾರಿಗಳು ಸುದೀರ್ಘ 9 ಗಂಟೆಗಳ ಕಾಲ ವಿಚಾರಣೆ ನಡೆಸಿದರು. ನಂತರ ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.
ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಇಬ್ಬರನ್ನೂ ವಿಚಾರಣೆ ನಡೆಸಿದ ಸಿಬಿಐ ಅಧಿಕಾರಿಗಳು ಸಂಜೆ 4.30 ರ ಸುಮಾರಿಗೆ ಪೊಲೀಸ್ ಭದ್ರತೆ ಮಧ್ಯೆ ವಿನಯ ಕುಲಕರ್ಣಿ ಅವರೊಬ್ಬರನ್ನೇ ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.
ಇದನ್ನೆಲ್ಲ ಗಮನಿಸಿದರೆ, ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಬಂಧಿಸಿದ್ದು, ಅದಕ್ಕಾಗಿಯೇ ವೈದ್ಯಕೀಯ ಪರೀಕ್ಷೆಗೊಳಪಡಿಸಿ, ನಂತರ ನ್ಯಾಯಾಧೀಶರ ನಿವಾಸದೆದುರು ಅವರನ್ನು ಹಾಜರುಪಡಿಸಲಿದ್ದಾರೆ.
Kshetra Samachara
05/11/2020 05:26 pm