ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ವಿನಯ ಕುಲಕರ್ಣಿ ಬಂಧನ: ಭುಗಿಲೆದ್ದ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬಂಧಿಸಿರುವುದರಿಂದ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ವಿನಯ್ ಅವರ ಬೆಂಬಲಿಗರಿಂದ ಆಕ್ರೋಶ ಭುಗಿಲೆದ್ದಿದೆ.

ವಿನಯ್ ಅವರನ್ನು ಭದ್ರತೆ ಮಧ್ಯೆ ಜಿಲ್ಲಾ ಆಸ್ಪತ್ರೆ ಹಾಗೂ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಪೊಲೀಸರು ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯರ್ತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇತ್ತ ವಿಜಯ ಕುಲಕರ್ಣಿ ಅವರನ್ನು ಇನ್ನೂ ಉಪನಗರ ಠಾಣೆಯಲ್ಲಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದರೆ, ಧಾರವಾಡದ ಜ್ಯುಬಿಲಿ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಉಪನಗರ ಠಾಣೆ ಎದುರು ವಿನಯ ಅವರ ಬೆಂಬಲಿಗರು ಕೈಯಲ್ಲಿ ಚಪ್ಪಲಿ ಹಿಡಿದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವಿರುದ್ಧ ಘೋಷಣೆ ಕೂಗಿದರು.

Edited By : Manjunath H D
Kshetra Samachara

Kshetra Samachara

05/11/2020 06:23 pm

Cinque Terre

77.18 K

Cinque Terre

19

ಸಂಬಂಧಿತ ಸುದ್ದಿ