ಬೆಳಗಾವಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿ ಹಿಂಡಲಗಾ ಜೈಲಲ್ಲಿ ನಿದ್ದೆ ಮಾಡದೇ ರಾತ್ರಿ ಕಳೆದಿದ್ದಾರೆ ಎನ್ನಲಾಗಿದೆ.
ಗುರುವಾರ ಬೆಳಗ್ಗೆ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ನಂತರ ಸಂಜೆ ವೇಳೆಗೆ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಲಾಗಿತ್ತು. 1 ದಿನದ ಮಟ್ಟಿಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಹಿನ್ನೆಲೆಯಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿಗೆ ಕರೆದುಕೊಂಡು ಹೋಗಲಾಗಿತ್ತು.
ಸದ್ಯ ಹಿಂಡಲಗಾ ಜೈಲಿನ ರೆಡ್ ಝೋನ್ ಸೆಲ್‍ನಲ್ಲಿ ಇರುವ ವಿನಯ್ ಕುಲಕರ್ಣಿ, ಕೋವಿಡ್ ಹಿನ್ನೆಲೆ ಜೈಲು ಸಿಬ್ಬಂದಿ ಸೆಲ್‍ನಲ್ಲಿ ಒಬ್ಬರನ್ನು ಇರಿಸಿದ್ದಾರೆ. ಸಾಮಾನ್ಯ ಕೈದಿಯಂತೆ ಒಂದು ರಾತ್ರಿ ಕಳೆದ ಮಾಜಿ ಸಚಿವರಿಗೆ ಸೆಲ್‍ನಲ್ಲಿ ಟಿವಿ ಸೇರಿದಂತೆ ಇನ್ನಿತರ ಯಾವದೇ ಸೌಲಭ್ಯ ಇಲ್ಲ. ಅಲ್ಲಿದ್ದ ಸೊಳ್ಳೆ ಕಾಟ ತಾಳಲಾರದ ವಿನಯ್ ಕುಲಕರ್ಣಿ ಸೊಳ್ಳೆ ಬತ್ತಿಯಾದ್ರೂ ಕೊಡ್ರಿ ಎಂದು ಜೈಲು ಸಿಬ್ಬಂದಿಗೆ ಮನವಿ ಮಾಡಿಕೊಂಡಿದ್ದಾರೆ. ರಾತ್ರಿಯಿಡೀ ನಿದ್ದೆ ಮಾಡದೆ ಯೋಚನೆಯಲ್ಲೇ ರಾತ್ರಿ ಕಳೆದಿದ್ದಾರೆ ಎನ್ನಲಾಗಿದೆ. ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಮತ್ತೆ ವಿಚಾರಣೆ ನಡೆಯಲಿದೆ. ವಿನಯ್ ಕುಲಕರ್ಣಿ ಅವರಿಗೆ ವಿಚಾರಣಾಧೀನ ಕೈದಿ ಸಂಖ್ಯೆ 16635 ನೀಡಲಾಗಿದೆ. ಕೋವಿಡ್ ಮಾರ್ಗಸೂಚಿ ಪ್ರಕಾರ ಜೈಲಿನ ಪ್ರತ್ಯೇಕ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ.
Kshetra Samachara
06/11/2020 08:47 am