ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಬಿಜೆಪಿ ಆದ್ರೂ ವಿಲೀನವಾಗಲಿ ಅಥವಾ ಬಿಜೆಪಿಯಲ್ಲಿ ಕಾಂಗ್ರೆಸ್ ಪಕ್ಷವಾದರೂ ವಿಲೀನವಾಗಲಿ ಎಂದು ಮಾಜಿ ಶಾಸಕ ಎನ್.ಎಚ್.ಕೊನರೆಡ್ಡಿ ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನವಲಗುಂದ ಪುರಸಭಾ ಚುನಾವಣೆ ಹಿನ್ನೆಲೆಯಲ್ಲಿಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,ಧಾರವಾಡ ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲ ಪಡೆದು ಕಾಂಗ್ರೆಸ್ ಅಧಿಕಾರ ಪಡೆದಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ.ಈ ಹಿನ್ನೆಲೆಯಲ್ಲಿ ಅಧಿಕಾರಕ್ಕಾಗಿ ಎರಡು ಪಕ್ಷಗಳು ವಿಲೀನವಾಗಲಿ ಎಂದು ಟೀಕಿಸಿದರು.
Kshetra Samachara
06/11/2020 01:06 pm