ಕಲಘಟಗಿ: ಪಟ್ಟಣ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎರಡು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಒಂದು ನಾಮಪತ್ರ ಸಲ್ಲಿಕೆಯಾಗಿದ್ದು ,ಪೊಲೀಸ್ ಬಿಗಿ ಬಂದೋಬಸ್ತ ಮಾಡಲಾಗಿದೆ.
ಕಲಘಟಗಿ ಪಟ್ಟಣ ಪಂಚಾಯಿತಿಗೆ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ 17 ನೇ ವಾರ್ಡ್ ನ ಸದಸ್ಯೆ ಅನಸೂಯಾ ಹೆಬ್ಬಳ್ಳಿಮಠ ಹಾಗೂ ಜೆ ಡಿ ಎಸ್ ನ 7ನೇ ವಾರ್ಡ್ ನ ಸದಸ್ಯೆ ಶಕುಂತಲಾ ಬೋಳಾರ ನಾಮಪತ್ರ ಸಲ್ಲಿಸಿದ್ದಾರೆ.
ಉಪಾಧ್ಯಕ್ಷ ಸ್ಥಾನಕ್ಕೆ 11 ನೇ ವಾರ್ಡ್ ಬಿಜೆಪಿ ಸದಸ್ಯೆ ಯಲ್ಲವ್ವ ಶಿಗ್ಲಿ ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. ಪಟ್ಟಣ ಪಂಚಾಯತಿ ಹತ್ತಿರ ಪೊಲೀಸ್ ಬಂದೋಬಸ್ತ ಮಾಡಲಾಗಿದೆ.
Kshetra Samachara
06/11/2020 03:08 pm