ಹುಬ್ಬಳ್ಳಿ: ಧಾರವಾಡ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸಿಬಿಐ ವಿಚಾರಣೆಯಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜನ್ಮದಿನವನ್ನು ಹುಬ್ಬಳ್ಳಿ ಹೊರವಲಯದ ಸಿಎಆರ್ ಮೈದಾನ ಹತ್ತಿರ ಕೇಕ್ ಕತ್ತರಿಸುವ ಮೂಲಕ ಆಚರಣೆ ಮಾಡಲಾಯಿತು.
ಇದೇ ವೇಳೆ ಮಾತನಾಡಿದ ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅನೀಲಕುಮಾರ ಪಾಟೀಲ ಮಾತನಾಡಿ,ಬಿಜೆಪಿಯವರು ಏನೇ ಕುತಂತ್ರ ಮಾಡಿದರು ವಿನಯ ಕುಲಕರ್ಣಿ ಅವರಿಗೆ ಏನು ತೊಂದರೆ ಆಗುವುದಿಲ್ಲ.ಅಲ್ಲದೇ ವಿನಯ ಕುಲಕರ್ಣಿ ಅವರು ಯಾವುದೇ ತಪ್ಪು ಮಾಡಿಲ್ಲ ಎಂದರು.
ಬಿಜೆಪಿಗರು ಡಿ.ಕೆ.ಶಿವಕುಮಾರ್ ಅವರಿಗೆ ಹಲವಾರು ಕುತಂತ್ರ ಮಾಡಿದರು ಆದರೇ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಏರಿದ್ದಾರೆ.ಈ ನಿಟ್ಟಿನಲ್ಲಿ ವಿನಯ ಕುಲಕರ್ಣಿ ಅವರು ಕೂಡ ಉನ್ನತ ಸ್ಥಾನಕ್ಕೆ ಏರುವ ಮೂಲಕ ಬಿಜೆಪಿ ಕುತಂತ್ರಕ್ಕೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.
Kshetra Samachara
07/11/2020 02:53 pm