ಧಾರವಾಡ : ಇಂದು 52ನೇ ವಸಂತಕ್ಕೆ ಕಾಲಿಟ್ಟ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಹುಟ್ಟು ಹಬ್ಬದ ಹಿನ್ನೆಲೆ ಅವರ ಅಭಿಮಾನಿಗಳು ಕೆಕ್ ಕತ್ತರಿಸಿ,ರಕ್ತದಾನ ಮಾಡಿದರು.
ಯೋಗೇಶ್ ಗೌಡ ಕೊಲೆ ಪ್ರಕರಣದಡಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಪ್ರತಿವರ್ಷ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದರು.ಆದರೆ ಈ ಬಾರಿ ವಿನಯ್ ಕುಲಕರ್ಣಿ ಅವರು ಸಿಬಿಐ ತನಿಖೆ ಎದುರಿಸುತ್ತಿರುವ ಹಿನ್ನೆಲೆ ಅಭಿಮಾನಿಗಳಿಂದ ಹುಟ್ಟುಹಬ್ಬ ಆಚರಣೆ ಮಾಡಿದರು.
ನಗರದ ಗಾಂಧಿಚೌಕನಲ್ಲಿರುವ ಲಯನ್ಸ್ ಜಿಮ್ನಲ್ಲಿ ಸರ್ಕಾರಿ ಆಸ್ಪತ್ರೆಯ ರಕ್ತದಾನ ಕೇಂದ್ರದಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಏರ್ಪಡಿಸಲಾಗಿತ್ತು.ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ರಕ್ತದಾನ ಮಾಡಿ ನಂತರ ಕೇಕ್ ಕಟ್ ಮಾಡಿ ಸಂಭ್ರಮಿಸಿದರು.
ಅಭಿಮಾನಿಯೊಬ್ಬರು ವಿನಯ್ ಕುಲಕರ್ಣಿ ಅವರ ಭಾವಚಿತ್ರ ಹೊಂದಿರುವ ಮುಖವಾಡ ಧರಿಸಿ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿರಬಹುದು. ಆದರೆ ಅವರ ಜೊತೆ ಕಾರ್ಯಕರ್ತರಿದ್ದಾರೆ. ಅವರು ಆದಷ್ಟು ಶೀಘ್ರ ಹೊರಬರಲಿದ್ದಾರೆ ಎಂದರು.
Kshetra Samachara
07/11/2020 06:52 pm