ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ನ್ಯಾಯಾಲಯದ ಮುಂದೆ ಕಾಯುತ್ತಿರುವ ಜಿಪಂ ಅಧ್ಯಕ್ಷೆ

ಧಾರವಾಡ: ಸಿಬಿಐನಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಇಂದು ಜಿಲ್ಲಾ ನ್ಯಾಯಾಲಯದ ಎದುರು ಹಾಜರುಪಡಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಸಂಬಂಧಿ ಹಾಗೂ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ಅವರು ಧಾರವಾಡದ ಜಿಲ್ಲಾ ನ್ಯಾಯಾಲಯದ ಮುಂದೆ ವಿನಯ್ ಆಗಮನಕ್ಕಾಗಿ ಕಾಯುತ್ತಿದ್ದಾರೆ.

ಈಗಾಗಲೇ ನ್ಯಾಯಾಲಯದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿನಯ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದ್ದು, ಅವರ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಸೇರಬೇಕು ಎಂದು ಕರೆ ಕೊಟ್ಟ ಹಿನ್ನೆಲೆಯಲ್ಲಿ ಪೊಲೀಸರು ದೊಡ್ಡಮಟ್ಟದಲ್ಲಿ ಬಂದೋಬಸ್ತ್ ಕೈಗೊಂಡಿದ್ದಾರೆ. ಇದರ ಮಧ್ಯೆ ವಿಜಯಲಕ್ಷ್ಮೀ ಪಾಟೀಲ ಅವರು ನ್ಯಾಯಾಲಯದ ಮುಂದೆ ವಿನಯ್ ಅವರ ಆಗಮನಕ್ಕಾಗಿ ಕಾಯುತ್ತಿದ್ದಾರೆ.

Edited By : Manjunath H D
Kshetra Samachara

Kshetra Samachara

09/11/2020 12:01 pm

Cinque Terre

88.13 K

Cinque Terre

0

ಸಂಬಂಧಿತ ಸುದ್ದಿ