ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ಯ ಶ್ಲಾಘನೀಯ : ಸಚಿವ ಜಗದೀಶ ಶೆಟ್ಟರ್

ಧಾರವಾಡ: ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಟ್ಯಾಬ್ ಮತ್ತು ಲ್ಯಾಪ್ ಟಾಪ್ ಉದ್ಘಾಟನೆಯನ್ನು ಧರ್ಮಸ್ಥಳದಲ್ಲಿ ಏಕ ಕಾಲದಲ್ಲಿ ಮಾಡಲಾಗುತ್ತಿದ್ದು ಧರ್ಮಸ್ಥಳದ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ

ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಹೇಳಿದರು.

ಇಂದು ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯು ಧಾರವಾಡ ಜಿಲ್ಲೆಯ ಹುಬ್ಬಳ್ಳಿ,ಕುಂದಗೋಳ, ಕಲಘಟಗಿ, ಹಾಗೂ ಧಾರವಾಡ ತಾಲೂಕಿನ ವಿದ್ಯಾರ್ಥಿಗಳಿಗೆ ಟ್ಯಾಬ್ ಮತ್ತು ಲ್ಯಾಪ್ ಟಾಪ್ ಉದ್ಘಾಟನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ ಮಾಡುವಂಥ ಕೆಲಸವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಅವರು ಮಾಡುತ್ತಿದ್ದಾರೆ ಎಂದು ತಿಳಿಸಿದ್ದು,ಸಾಮಾಜಿಕ ಪರಿವರ್ತನೆಯಲ್ಲಿ ಧರ್ಮಾಧಿಕಾರಿಗಳ ಕಾರ್ಯ ಮೌನ ಕ್ರಾಂತಿ ಆಗಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಧಾರವಾಡ ಪ್ರಾದೇಶಿಕ ವ್ಯಾಪ್ತಿಯ ನಿರ್ದೇಶಕರಾದ ದುಗ್ಗೇಗೌಡಾ, ಮುಖ್ಯ ಅತಿಥಿಗಳಾಗಿ ರಾಜಣ್ಣ ಕೊರವಿ,ವಿಶ್ವಮಾನ್ಯ ಪ್ರಶಸ್ತಿ ಪುರಸ್ಕೃತ ಸಂತೋಷ್ ಆರ್ ಶೆಟ್ಟಿ, ಪಿರಾಜಿ ಖಂಡೇಕರ್, ಜಿಲ್ಲೆಯ ನಿರ್ದೇಶಕರರಾದ ಸುರೇಶ ಎಂ,ಉಲ್ಲಾಸ್ ಮೇಸ್ತ ಮಂಜುನಾಥ, ಜನಜಾಗೃತಿ ಸದಸ್ಯರು ಸೇರಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Edited By : Manjunath H D
Kshetra Samachara

Kshetra Samachara

10/11/2020 09:25 am

Cinque Terre

24.86 K

Cinque Terre

1

ಸಂಬಂಧಿತ ಸುದ್ದಿ