ಕುಂದಗೋಳ : ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿನ ಬಸವಣ್ಣನವರ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನ ಮಾಡಿರುವುದನ್ನು ಖಂಡಿಸಿ ಕಲ್ಯಾಣಪುರ ಬಸವಣ್ಣಜ್ಜನವರ ನೇತೃತ್ವದಲ್ಲಿ ತಾಲೂಕು ವೀರಶೈವ ಮಹಾಸಭಾ ಅಧ್ಯಕ್ಷ ಮಂಜುನಾಥ ಏಂಟ್ರೂವಿಯವರು ಹಾಗೂ ಪಟ್ಟಣದ ಸಾರ್ವಜನಿಕರು ಗ್ರೇಡ್-2 ತಹಶೀಲ್ದಾರ ವಿ.ವಾಯ್.ಮುಳಗಂದಮಠರವರ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು.
ಬಳಿಕ ಮಾತನಾಡಿದ ಕಲ್ಯಾಣಪುರ ಬಸವಣ್ಣಜ್ಜನವರು ವಿಶ್ವಗುರು ಬಸವಣ್ಣನವರ ಮೂರ್ತಿಯನ್ನು ಭಗ್ನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಬೇಕು ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಸರ್ಕಾರ ಎಚ್ಚರವಹಿಸಿ ಮಹಾತ್ಮರ ಪುತ್ಥಳಿಗಳಿಗೆ ಕಣ್ಗಾವಲಾಗಿ ಸಿಸಿ ಕ್ಯಾಮರಾ ಅಳವಡಿಸುವಂತೆ ಮನವಿ ಇಟ್ಟರು.
Kshetra Samachara
10/11/2020 01:22 pm