ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಧಾನ ಪರಿಷತ್ ಚುನಾವಣೆ : ಸಂಕನೂರ ಮುನ್ನಡೆ

ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದ್ದು, ಮೊದಲ ಸುತ್ತಿನ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಳ್ಳುತ್ತ ಬಂದಿದೆ.

ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ 7 ಸಾವಿರ ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಕುಬೇರಪ್ಪ ಅವರು 4500 ಮತಗಳನ್ನು ಪಡೆದಿದ್ದಾರೆ.

3500 ಮತಗಳು ತಿರಸ್ಕೃತಗೊಂಡಿದ್ದು, ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರು 1800 ಮತಗಳನ್ನು ಪಡೆದು ನಾಲ್ಕನೇ ಸ್ಥಾನದಲ್ಲಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

10/11/2020 02:25 pm

Cinque Terre

42.13 K

Cinque Terre

2

ಸಂಬಂಧಿತ ಸುದ್ದಿ