ಧಾರವಾಡ: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಯ ಮೂರನೇ ಸುತ್ತು ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಗೆಲುವಿನತ್ತ ದಾಪುಗಾಲು ಹಾಕಿದ್ದಾರೆ.
ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಒಟ್ಟು 41998 ಮತಗಳನ್ನು ಎಣಿಕೆ ಮಾಡಲಾಗಿದೆ.
ಬಿಜೆಪಿ ಅಭ್ಯರ್ಥಿ ಸಂಕನೂರ ಅವರು 19565 ಮತಗಳನ್ನು ಪಡೆದು ಗೆಲುವಿನತ್ತ ದಾಪುಗಾಲು ಹಾಕಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಕುಬೇರಪ್ಪ ಅವರು 9449 ಮತಗಳನ್ನು ಪಡೆದು ಎರಡನೇ ಸ್ಥಾನ ಕಾಪಾಡಿಕೊಂಡಿದ್ದಾರೆ.
ಇನ್ನು ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರು 5284 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.
ಪ್ರಸಕ್ತ ವರ್ಷವೂ ಕಮಲಕ್ಕೆ ಜೈ ಎಂದಿರುವ ಮತದಾರ, ಶಿಕ್ಷಕರಾಗಿದ್ದ ಬಸವರಾಜ ಗುರಿಕಾರ ಅವರಿಗೆ ಮಣೆ ಹಾಕಿಲ್ಲ.
ಮೂರನೇ ಸುತ್ತಿನ ವೇಳೆಗೆ
34953 ಮತಗಳು ಸಿಂಧುವಾಗಿದ್ದರೆ, 7045 ಮತಗಳು ಅಸಿಂಧುವಾಗಿವೆ.
Kshetra Samachara
10/11/2020 06:57 pm