ಹುಬ್ಬಳ್ಳಿ: ಶಾಹೀನ್ ಶಿಕ್ಷಣ ಸಂಸ್ಥೆಯು ಪ್ರಸಕ್ತ ಸಾಲಿನ ನೀಟ್ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಐದು ಕೋಟಿ ವಿದ್ಯಾರ್ಥಿ ವೇತನ ನೀಡಲು ಮುಂದಾಗಿದ್ದು,ಡಾ.ಅಬ್ದುಲ್ ಖದೀರ್ ನಿರ್ದೇಶನದ ಮೇರೆಗೆ ಸಂಸ್ಥೆಯ ದೇಶದ ಎಲ್ಲ ಶಾಖೆಗಳಲ್ಲಿಯೂ ವಿದ್ಯಾರ್ಥಿ ವೇತನ ನೀಡಲು ನಿರ್ಧರಿಸಿದೆ.
ಹೌದು...ಕಾರ್ತಿಕ ರೆಡ್ಡಿ ವಿದ್ಯಾರ್ಥಿ ನೀಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ರ್ಯಾಂಕ್ ಹಾಗೂ ದೇಶದಲ್ಲಿ 09ನೇ ರ್ಯಾಂಕ್ ಪಡೆದಿದ್ದಾರೆ.ಇನ್ನೂ ಅರ್ಬಾಜ್ ಅಹ್ಮದ್ ಎಂಬುವ ವಿದ್ಯಾರ್ಥಿ ನೀಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೇ ರ್ಯಾಂಕ್ ಹಾಗೂ ದೇಶದಲ್ಲಿ 85ನೇ ರ್ಯಾಂಕ್ ಪಡೆದಿದ್ದು,ಈ ಹಿನ್ನೆಲೆಯಲ್ಲಿ ಪ್ರತಿಭಾನ್ವಿತ ಯುವ ಪ್ರತಿಭೆಯನ್ನು ಪ್ರೋತ್ಸಾಹಿಸುವ ಸದುದ್ದೇಶದಿಂದ ಶಾಹೀನ್ ಶಿಕ್ಷಣ ಸಂಸ್ಥೆ ಐದು ಕೋಟಿ ಸ್ಕಾಲರ್ಶಿಪ್ ನೀಡಲು ಮುಂದಾಗಿದೆ.
Kshetra Samachara
12/11/2020 05:11 pm