ಹುಬ್ಬಳ್ಳಿ; ರೈತರು ಬೆಳೆದ ಬೆಳೆಗಳಿಗೆ ಶಾಶ್ವತ ಖರೀದಿ ಕೇಂದ್ರ ಹಾಗೂ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ರೈತಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವಿರೇಶ ಸೊಬರದಮಠ ಆಗ್ರಹಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ,ರೈತರು ಬೆಳೆದ ಯಾವ ಬೆಳೆಗಳಿಗೂ ನಾಯಯುತ ಬೆಲೆ ದೊರೆಯುತ್ತಿಲ್ಲ. ಹೀಗಾಗಿ ರೈತರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ.ಈ ಬಾರಿ ಅತಿವೃಷ್ಟಿಯಿಂದ ಸಂಪೂರ್ಣ ಬೆಳೆ ಹಾನಿಯಾಗಿದೆ . ಹೀಗಾಗಿ ಹಿಂಗಾರು ಮುಂಗಾರು ಪೂರ್ವದಲ್ಲಿಯೇ ಶಾಶ್ವತ ಬೆಲೆ ಹಾಗೂ ಖರೀದಿ ಕೇಂದ್ರ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ದೀಪಾವಳಿ ಒಳಗಾಗಿ ಖರೀದಿ ಕೇಂದ್ರ ಆರಂಭಿಸಬೇಕು . ಇಲ್ಲವಾದರೆ ಸರ್ಕಾರಿ ಕಚೇರಿಗಳ ಎದುರು ಅನಿರ್ದಿಷ್ಟ ಧರಣಿಯ ನಡೆಸಲಾಗುವದು ಎಂದು ಎಚ್ಚರಿಕೆ ನೀಡಿದರು.
Kshetra Samachara
12/11/2020 05:21 pm