ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬಸವಕಲ್ಯಾಣದಿಂದ ವಿಜಯೇಂದ್ರ ಸ್ಪರ್ಧೆ ಇಲ್ಲ: ಸಚಿವ ಸೋಮಶೇಖರ

ಧಾರವಾಡ: ಬಸವಕಲ್ಯಾಣದ ಉಪಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ವತಃ ಸಿಎಂ ಯಡಿಯೂರಪ್ಪನವರೇ ಹೇಳಿದ್ದಾರೆ. ವಿಜಯೇಂದ್ರ ಕೂಡ ಸ್ಪರ್ಧೆ ಮಾಡುವುದಿಲ್ಲ ಎಂದಿದ್ದಾರೆ ಎಂದು ಸಹಕಾರ ಖಾತೆ ಸಚಿವ ಎಸ್.ಟಿ.ಸೋಮಶೇಖರ ಹೇಳಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣದಿಂದ ಯಾರು ಸ್ಪರ್ಧೆ ಮಾಡಬೇಕು ಎಂಬುದರ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

ರಮೇಶ ಜಾರಕಿಹೊಳಿ ಅವರು ಶಾಸಕರೊಂದಿಗೆ ನಡೆಸಿದ ಸಭೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಸಿದವರು ಬಿಜೆಪಿ ಶಾಸಕರೇ ಹೊರತು ಬೇರೆ ಯಾರೂ ಅಲ್ಲ. ಅವರು ಸಭೆ ನಡೆಸಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ. ಮಂತ್ರಿಮಂಡಲ ವಿಸ್ತರಣೆ ಮಾಡುವುದು ಮುಖ್ಯಮಂತ್ರಿಗೆ ಪರಮಾಧಿಕಾರವಿದೆ. ಎಚ್. ವಿಶ್ವನಾಥ ಹಿರಿಯರು. ಅವರಿಗೆ ರಾಜಕೀಯದಲ್ಲಿ ಅನುಭವವಿದೆ. ಇನ್ನೂ ಮಂತ್ರಿ ಮಂಡಲ ವಿಸ್ತರಣೆಯಾಗಿಲ್ಲ. ಅದರ ಬಗ್ಗೆ ಮಾತನಾಡುವ ಅಧಿಕಾರ ಸಚಿವರಾಗಲಿ, ಶಾಸಕರಿಗಾಗಲಿ ಇಲ್ಲ. ಅದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು ಎಂದರು.

ಪತ್ರಕರ್ತ ರವಿ ಬೆಳಗೆರೆ ನಿಧನದ ಸುದ್ದಿ ಬೇಸರ ತರಿಸಿದೆ. ಅವರ ಕುಟುಂಬಸ್ಥರಿಗೆ ದುಃಖ ತಡೆದುಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದರು.

ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನದಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪವಿಲ್ಲ. ಸಿಬಿಐ ಕಾನೂನಾತ್ಮಕವಾಗಿ ಕೆಲಸ ಮಾಡುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Edited By : Manjunath H D
Kshetra Samachara

Kshetra Samachara

13/11/2020 12:18 pm

Cinque Terre

35.03 K

Cinque Terre

0

ಸಂಬಂಧಿತ ಸುದ್ದಿ