ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ವಿನಯ್ ಬಂಧನದ ಹಿಂದೆ ನನ್ನ ಕೈವಾಡ ಇದೆ ಎಂದವರಿಗೆ ದೇವರು ಸದ್ಬುದ್ಧಿ ಕೊಡಲಿ

ಧಾರವಾಡ: ಕಾನೂನು ತನ್ನ ಕೆಲಸ ಮಾಡುತ್ತಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನದ ಹಿಂದೆ ನನ್ನ ಕೈವಾಡ ಇದೆ ಎಂದು ಆರೋಪಿಸುವವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಅವರ ಬಗ್ಗೆ ಕೇಳಿದ ಪ್ರಶ್ನೆಗೆ ಹೆಚ್ಚು ಉತ್ತರಿಸದ ಅವರು, ನನ್ನ ಮೇಲೆ ಆರೋಪ ಮಾಡುವವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದಷ್ಟೇ ಉತ್ತರಿಸಿದರು.

ರವಿ ಬೆಳಗೆರೆ ಹಾಗೂ ವಿ.ಸಿ.ಐರಸಂಗ ಅವರ ನಿಧನಕ್ಕೆ ಜೋಶಿ ಸಂತಾಪ ವ್ಯಕ್ತಪಡಿಸಿದರು.

ಶಾಸಕರ ಸಭೆಗಳು ಅಲ್ಲಲ್ಲಿ ನಡೆಯುತ್ತಲೇ ಇರುತ್ತವೆ. ಅದಕ್ಕೂ ಸಚಿವ ಸಂಪುಟ ವಿಸ್ತರಣೆಗೂ ಸಂಬಂಧ ಇರುವುದಿಲ್ಲ. ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳು ಹಾಗೂ ಪಕ್ಷ ಹೈಕಮಾಂಡ್ ಗೆ ಬಿಟ್ಟದ್ದು ಎಂದರು.

ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂಬೆಲ್ಲ ಮಾತುಗಳು ಕೇಳಿ ಬಂದಿದ್ದವು. ಆದರೆ, ಉಪಚುನಾವಣೆ, ಬಿಹಾರ ಚುನಾವಣೆ ಸೇರಿದಂತೆ ಅನೇಕ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದೆ. ಆರ್ಥಿಕತೆ ಹದಗೆಟ್ಟಿತ್ತು. ಆದರೆ, ವಿದ್ಯುತ್ ಉತ್ಪಾದನೆ ಹಾಗೂ ಜಿಎಸ್ ಟಿ ಸಂಗ್ರಹದಲ್ಲಿ ಭಾರತ ಸುಧಾರಣೆ ಕಾಣುತ್ತಿದೆ ಎಂದರು.

Edited By : Manjunath H D
Kshetra Samachara

Kshetra Samachara

13/11/2020 03:01 pm

Cinque Terre

96.15 K

Cinque Terre

13

ಸಂಬಂಧಿತ ಸುದ್ದಿ