ಹುಬ್ಬಳ್ಳಿ:ಉಪ ಚುನಾವಣೆಯಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರದಿಂದ ವಿಜೇತರಾದ ಶಾಸಕ ಮುನಿರತ್ನ ಅವರು ಹುಬ್ಬಳ್ಳಿಯಲ್ಲಿ ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರ ಮನೆಗೆ ನೀಡಿದರು.
ಇದೇ ವೇಳೆ ಶಾಸಕ ಮುನಿರತ್ನ ಅವರು ಜಗದೀಶ ಶೆಟ್ಟರ್ ಅವರಿಗೆ ಸನ್ಮಾನಿಸಿದರು.ಅದೇ ರೀತಿ ಭಾರತೀಯ ಜನತಾ ಪಕ್ಷದ ಮೂಲಕ ರಾಜರಾಜೇಶ್ವರಿ ನಗರದಲ್ಲಿ ವಿಜಯ ಪತಾಕೆ ಹಾರಿಸಿದ ಶಾಸಕ ಮುನಿರತ್ನ ಅವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷವನ್ನು ಮತ್ತಷ್ಟು ಬಲ ಪಡಿಸುವ ಕುರಿತು ಸಚಿವ ಶೆಟ್ಟರ್ ನಿವಾಸದಲ್ಲಿ ವಿಚಾರ ವಿನಿಮಯ ಮಾಡಿಕೊಂಡು ಬಳಿಕ ದೀಪಾವಳಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
Kshetra Samachara
14/11/2020 07:46 pm