ಬೆಳಗಾವಿ: ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಜೈಲಿನಲ್ಲಿ ಕಣ್ಣೀರಿಟ್ಟಿದ್ದಾರೆ.
ವಿನಯ್ ಕುಲಕರ್ಣಿ ಅವರು ಪ್ರತಿವರ್ಷವೂ ಕುಟುಂಬದವರೊಂದಿಗೆ ದೀಪಾವಳಿ ಹಬ್ಬವನ್ನು ಸಂಭ್ರಮಿಸುತ್ತಿದ್ದರು. ಆದರೆ ಸದ್ಯ ಜೈಲಿನಲ್ಲಿರುವ ಅವರು ಕುಟುಂಬಸ್ಥರನ್ನು ನೆನೆದು ಕಣ್ಣೀರು ಹಾಕುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಅಷ್ಟೇ ಅಲ್ಲದೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
‘ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನನ್ನನ್ನು ನೋಡಲು ಕುಟುಂಬಸ್ಥರು ಬರುತ್ತಾರೆ. ಅವರಿಗೆ ಕಡಿಮೆ ಸಮಯ ನೀಡಿದರೂ ಪರವಾಗಿಲ್ಲ, ಭೇಟಿಗೆ ಅವಕಾಶ ಕಲ್ಪಿಸಿಕೊಡಿ’ ಎಂದು ಮನವಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.
Kshetra Samachara
16/11/2020 07:27 am