ಹುಬ್ಬಳ್ಳಿ: ಸಚಿವ ಸಂಪುಟದಿಂದ ಕೈ ಬಿಡುತ್ತಾರೆ ಎಂಬುವಂತ ಯಾವುದೇ ಮಾಹಿತಿ ನನಗೆ ಬಂದಿಲ್ಲ.ಅಲ್ಲದೇ ಈ ಕುರಿತು ಯಾವುದೇ ವರಿಷ್ಠರು ನನ್ನೊಂದಿಗೆ ಮಾತನಾಡಿಲ್ಲ ಇದು ಕೇವಲ ಮಾಧ್ಯಮದಲ್ಲಿ ಸೃಷ್ಟಿಯಾಗಿರುವ ವಿಷಯವಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನನ್ನನ್ನು ಸಚಿವ ಸಂಪುಟದಿಂದ ಕೈ ಬಿಡುತ್ತಾರೆ ಎಂದು ಪಕ್ಷದಲ್ಲಿ ಯಾವುದೇ ರೀತಿ ಚರ್ಚೆಯಾಗಿಲ್ಲ ಅಲ್ಲದೆ ನನ್ನ ಕಿವಿಗೂ ಕೂಡ ಬಿದ್ದಿಲ್ಲ ಅಲ್ಲದೇ ಇದು ಮಾಧ್ಯಮದಲ್ಲಿ ಬಂದಿರುವ ಸುದ್ದಿಯಾಗಿದೆ.ನನ್ನ ಮೇಲೆ ನಂಬಿಕೆ ಇಟ್ಟು ರಾಷ್ಟ್ರೀಯ ಹಾಗೂ ರಾಜ್ಯದ ಮುಖಂಡರು ನನಗೆ ಸ್ಥಾನವನ್ನು ನೀಡಿದ್ದಾರೆ ಅದನ್ನು ನಾನು ಜವಾಬ್ದಾರಿಯುತವಾಗಿ ನಿಭಾಯಿಸುತ್ತಿದ್ದೇನೆ ಎಂದರು.
ರಾಜ್ಯದ ಜನತೆಗೆ ಪ್ರಮಾಣಿಕವಾಗಿ ನಾನು ಕೆಲಸ ಮಾಡಿದ್ದೇನೆ ನನಗೂ ಕೂಡ ವಿಶ್ವಾಸವಿದೆ.ಪಕ್ಷದ ಯಾವುದೇ ತೀರ್ಮಾನಕ್ಕೂ ನಾನು ಬದ್ದವಾಗಿದ್ದೇನೆ.ಅಲ್ಲದೇ ನನಗೆ ಕೊಟ್ಟಿರುವ ಜವಾಬ್ದಾರಿ ನಾನು ನ್ಯಾಯಸಮ್ಮತವಾಗಿ ನಿಭಾಯಿಸುತ್ತಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Kshetra Samachara
18/11/2020 08:48 pm