ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು ವಾಪಸ್ ಪಡೆದಿದ್ದು, ಹಲವು ಕೌತುಕಕ್ಕೆ ಕಾರಣವಾಗಿದೆ.
ಜಾಮೀನು ಕೋರಿ ವಿನಯ್ ಪರ ವಕೀಲರು ಧಾರವಾಡದ 3 ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಎರಡು ಬಾರಿ ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯ್ಯಾಲಯ ಎರಡು ಬಾರಿ ಅರ್ಜಿಯ ವಿಚಾರಣೆ ಮುಂದೂಡಿತ್ತು. ಇಂದು ವಿಚಾರಣೆ ನಡೆಯುವ ವೇಳೆ ವಿನಯ್ ಕುಲಕರ್ಣಿ ಪರ ವಕೀಲರು ಜಾಮೀನು ಕೋರಿ ತಾವು ಸಲ್ಲಿಸಿದ್ದ ಅರ್ಜಿಯನ್ನೇ ವಾಪಸ್ ಪಡೆದಿದ್ದಾರೆ.
Kshetra Samachara
19/11/2020 12:54 pm