ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಲಕಿಯರ ಸರ್ಕಾರಿ ಬಾಲಮಂದಿರದ ನೂತನ ಕಟ್ಟಡ ನಿರ್ಮಾಣಕ್ಕೆ 4 ಕೋಟಿ ರೂ. ಅನುದಾನ: ಜೊಲ್ಲೆ

ಹುಬ್ಬಳ್ಳಿ: ಹುಬ್ಬಳ್ಳಿ ಘಂಟಿಕೇರಿಯ ಬಾಲಕಿಯರ ಸರ್ಕಾರಿ ಬಾಲಮಂದಿರದ ನೂತನ ಕಟ್ಟಡ ನಿರ್ಮಾಣಕ್ಕೆ 4 ಕೋಟಿ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಶೀಘ್ರವಾಗಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಘಂಟಿಕೇರಿ ಸರ್ಕಾರಿ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ನೀಡಿದ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ಇಲಾಖೆ ವತಿಯಿಂದ ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಯಾವುದೇ ಖಾಸಗಿ ಸಂಸ್ಥೆಗಳಿಗಿಂತ ಕೆಡಿಮೆ ಇರದ ಹಾಗೆ ಬಾಲಮಂದಿರದ ನಿರ್ವಹಣೆ ಮಾಡಿದ್ದಾರೆ. ಮಕ್ಕಳು ಸಮಯವನ್ನು ವ್ಯರ್ಥ ಮಾಡದೆ ಉತ್ತಮ ರೀತಿಯಲ್ಲಿ ಅಭ್ಯಾಸ ಮಾಡಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗಾಗಿ ವೃತ್ತಿಪರ ಕೌಶಲ್ಯ ತರಬೇತಿ ನೀಡಲಾಗುವುದು ಎಂದರು.

Edited By : Vijay Kumar
Kshetra Samachara

Kshetra Samachara

19/11/2020 01:09 pm

Cinque Terre

20.24 K

Cinque Terre

0

ಸಂಬಂಧಿತ ಸುದ್ದಿ