ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮಾರಾಠಾ ಪ್ರಾಧಿಕಾರ ಭಾಷೆಗೆ ಸಂಬಂಧಿಸಿದ್ದಲ್ಲ, ಸಮುದಾಯಕ್ಕೆ ಸಂಬಂಧಿಸಿದ್ದು

ಧಾರವಾಡ: ಮರಾಠಾ ಪ್ರಾಧಿಕಾರ ರಚನೆ ಇದು ಮರಾಠಾ ಭಾಷೆಗೆ ಸಂಬಂಧಿಸಿದ್ದಲ್ಲ. ಮರಾಠಾ ಸಮುದಾಯದವರಿಗಾಗಿ ತರುತ್ತಿರುವ ಪ್ರಾಧಿಕಾರ. ಭಾಷೆ ಬಗ್ಗೆ ಇದರಲ್ಲಿ ಯಾವುದೇ ವಿಷಯಗಳಿಲ್ಲ. ಮರಾಠಾ ಸಮುದಾಯದವರು ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಬಲಿಷ್ಠರಾಗಲು ಈ ಮರಾಠಾ ಪ್ರಾಧಿಕಾರ ರಚನೆ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ಸಮುದಾಯವರ ಏಳ್ಗೆಗಾಗಿ ಪ್ರಾಧಿಕಾರ ರಚನೆ ಮಾಡಲಾಗುತ್ತಿದೆ. ಇದರಲ್ಲಿ ಭಾಷೆಯ ಯಾವುದೇ ವಿಷಯ ಇಲ್ಲ ಎಂದರು.

ಲಾಕಡೌನ್ ಅವಧಿಯಲ್ಲಿ ಕೆಲವು ಜಿಲ್ಲೆಗಳಲ್ಲಿ ಬಾಲ್ಯ ವಿವಾಹಗಳಾಗಿವೆ. ದೂರು ಕೂಡ ದಾಖಲಾಗುವುದು ಸಮಸ್ಯೆಯಾಗಿತ್ತು. ಆದರೆ, ಈಗ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಬಿಜೆಪಿ ಪಕ್ಷವು ಮೂಲ ಬಿಜೆಪಿಗರನ್ನು ಕಡೆಗಣಿಸುತ್ತಿಲ್ಲ. ಯಾರಿಗೂ ಅನ್ಯಾಯವಾಗದಂತೆ ಮಣೆ ಹಾಕಲಿದೆ. ಯಡಿಯೂರಪ್ಪನವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಯಾವ ಶಾಸಕರಿಗೂ ಅನ್ಯಾಯ ಮಾಡುತ್ತಿಲ್ಲ. ಕೊರೊನಾ ಹಾಗೂ ಪ್ರವಾಹ ಪರಿಸ್ಥಿತಿಯಿಂದ ಅನುದಾನದ ಕೊರತೆಯಾಗಿದೆಯಷ್ಟೆ ಎಂದರು.

ಬೆಳಗಾವಿ ಲೋಕಸಭಾ ಟಿಕೆಟ್ ನ್ನು ಸುರೇಶ ಅಂಗಡಿಯವರ ಮನೆಯವರಿಗೆ ನೀಡಬೇಕು ಎಂಬ ಮಾತು ಕೇಳಿ ಬರುತ್ತಿದೆ. ಅಲ್ಲಿ ಹಲವಾರು ಜನ ಆಕಾಂಕ್ಷಿಗಳು ಕೂಡ ಇದ್ದಾರೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದರು.

Edited By : Nagesh Gaonkar
Kshetra Samachara

Kshetra Samachara

19/11/2020 01:37 pm

Cinque Terre

51.5 K

Cinque Terre

1

ಸಂಬಂಧಿತ ಸುದ್ದಿ