ಹುಬ್ಬಳ್ಳಿ: ಆರೋಗ್ಯ ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನವೆಂಬರ್ 21 ಶನಿವಾರದಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಳ್ಳುವರು. ಮಧ್ಯಾಹ್ನ 3:00 ಗಂಟೆಗೆ ಬೆಳಗಾವಿಯಿಂದ ಧಾರವಾಡಕ್ಕೆ ಆಗಮಿಸುವ ಅವರು ಧಾರವಾಡ ಇನ್ಸಿಟಟ್ಯೂಟ್ ಆಫ್ ಮೆಂಟಲ್ ಅಂಡ್ ನ್ಯೂರೋ ಸೈನ್ಸ್, ಸಂಸ್ಥೆಯ ನೂತನ ಕಟ್ಟಡಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 4:30ಕ್ಕೆ ಹುಬ್ಬಳ್ಳಿಗೆ ಆಗಮಿಸಿ ಕಿಮ್ಸ್ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ನಂತರ ವಿಮಾನದ ಮೂಲಕ ಹೈದರಾಬಾದ್ ಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
20/11/2020 05:27 pm