ಧಾರವಾಡ: ರಾಜ್ಯ ಸರ್ಕಾರ ಮಾರಾಠಾ ಪ್ರಾಧಿಕಾರ ರಚನೆಗೆ ಮುಂದಾಗಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಡಿ.5 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಈ ಬಂದ್ ಮಾಡುವ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನಿರಲಕೇರಿ ತಿಳಿಸಿದ್ದಾರೆ.
ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ ಅವರು, ಕರ್ನಾಟದಲ್ಲಿರುವ ಮರಾಠಿಗರು ಕರ್ನಾಟಕದವರೇ ಹೊರತು ಬೇರೆ ರಾಜ್ಯದವರಲ್ಲ. ಹೀಗಾಗಿ ಬಂದ್ ಮಾಡುವ ಅವಶ್ಯಕತೆ ಇಲ್ಲ.
ಆದರೆ, ರಾಜ್ಯ ಸರ್ಕಾರ ಬರುವ ಬೆಳಗಾವಿ ಲೋಕಸಭೆ ಉಪಚುನಾವಣೆ ಹಾಗೂ ಬಸವಕಲ್ಯಾಣ ಉಪಚುನಾವಣೆ ಗಮನದಲ್ಲಿಟ್ಟುಕೊಂಡು ಜಾತಿಗೊಂದು ಪ್ರಾಧಿಕಾರ ಹಾಗೂ ನಿಗಮ ಸ್ಥಾಪನೆ ಮುಂದಾಗಿರವುದು ಖಂಡನೀಯ.
ಚುನಾವಣೆ ಮುಗಿದ ನಂತರ ಇಂತಹ ನಿರ್ಧಾರಗಳನ್ನು ಸರ್ಕಾರ ಕೈಗೊಳ್ಳಲಿ. ಕೊರೊನಾದಂತಹ ಇಂತಹ ಸಂದರ್ಭದಲ್ಲಿ ಸರ್ಕಾರಗಳು ಇಂತಹ ನಿರ್ಧಾರಗಳಿಂದ ಹಿಂದೆ ಸರಿಯಬೇಕು ಎಂದರು.
Kshetra Samachara
20/11/2020 09:41 pm