ಧಾರವಾಡ: ಸಚಿವ ಸಂಪುಟ ವಿಸ್ತರಣೆ ಮಾಡುವ ಪರಮಾಧಿಕಾರ ಸಿಎಂಗೆ ಇದೆ. ಸಿಎಂ ಯಡಿಯೂರಪ್ಪ ಅವರು ಈಗಾಗಲೇ ಪಕ್ಷದ ವರಿಷ್ಠರನ್ನು ಭೇಟಿಯಾಗಿದ್ದಾರೆ ವರಿಷ್ಠರು ಯಾವಾಗ ಹೇಳುತ್ತಾರೋ ಆಗ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ವರಿಷ್ಠರನ್ನು ಪರವಾನಿಗಿ ಕೇಳುವುದು ಮೊದಲಿನಿಂದಲೂ ಬಂದ ಪದ್ಧತಿ ಹೀಗಾಗಿ ಅವರು ಯಾವಾಗ ಗ್ರೀನ್ ಸಿಗ್ನಲ್ ನೀಡುತ್ತಾರೋ ಆಗ ಸಂಪುಟ ವಿಸ್ತರಣೆ ಮಾಡಲಾಗುವುದು. ಇದರ ಬಗ್ಗೆ ಹೆಚ್ಚಿಗೆ ಮಾತನಾಡುವುದು ಬೇಡ ಎಂದರು.
Kshetra Samachara
21/11/2020 07:16 pm