ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಶಾಸಕ ಯತ್ನಾಳ ಪ್ರತಿಕೃತಿಗೆ ಚಪ್ಪಲಿ ಏಟು ನೀಡಿದ ಕರವೇ ಕಾರ್ಯಕರ್ತರು

ಧಾರವಾಡ: ಕನ್ನಡ ಪರ ಸಂಘಟನೆಗಳ ಕಾರ್ಯರ್ತರು ರೋಲ್ ಕಾಲ್ ಹೋರಾಟಗಾರರು ಎಂಬ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಖಂಡಿಸಿ ಕರವೇ ಕಾರ್ಯಕರ್ತರು ಧಾರವಾಡ ಕೋರ್ಟ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಶಾಸಕ ಯತ್ನಾಳ ಪ್ರತಿಕೃತಿ ಮಾಡಿದ ಪ್ರತಿಭಟನಾಕಾರರು ಅದಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದರು.

ಈ ವೇಳೆ ಪ್ರತಿಕೃತಿ ದಹಿಸಲು ಮುಂದಾದ ಕರವೇ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ಕೂಡ ನಡೆಯಿತು. ನಂತರ ಮನವೊಲಿಕೆಯಿಂದಾಗಿ ಪ್ರತಿಭಟನಾಕಾರರು ಪ್ರತಿಕೃತಿ ದಹಿಸುವುದನ್ನು ಕೈಬಿಟ್ಟರು.

ಕೂಡಲೇ ಯತ್ನಾಳ ಅವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Edited By : Nagesh Gaonkar
Kshetra Samachara

Kshetra Samachara

21/11/2020 09:31 pm

Cinque Terre

25.09 K

Cinque Terre

6

ಸಂಬಂಧಿತ ಸುದ್ದಿ