ಧಾರವಾಡ: ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಇವತ್ತು ಕೂಡ ರಿಲೀಫ್ ಸಿಗದಂತಾಗಿದೆ.
ಇಂದು ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ವಿಡಿಯೋ ಕಾನ್ಫರನ್ಸ್ ಮೂಲಕ ವಿನಯ್ ಅವರನ್ನು ಧಾರವಾಡದ ಜಿಲ್ಲಾ ನ್ಯಾಯಾಲಯದ ಎದುರು ಹಾಜರುಪಡಿಸಿದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯ ವಿನಯ್ ಕುಲಕರ್ಣಿ ಅವರನ್ನು ಮತ್ತೆ 14 ದಿನಗಳ ಕಾಲ ಅಂದರೆ ಡಿ.7 ರವರೆಗೆ ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಅವಧಿ ವಿಸ್ತರಿಸಿದೆ. ಇದರಿಂದ ವಿನಯ್ ಅವರಿಗೆ ರಿಲೀಫ್ ಸಿಗದಂತಾಗಿದೆ.
ಯೋಗೀಶಗೌಡರ ಕೊಲೆ ತನಿಖೆ ನಡೆಯುತ್ತಿರುವುದರಿಂದ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಬೇಕು ಎಂದು ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಹೀಗಾಗಿ ಜಿಲ್ಲಾ ನ್ಯಾಯಾಲಯ ವಿನಯ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಡಿ.7ರವರೆಗೂ ವಿಸ್ತರಿಸಿ ಆದೇಶ ಹೊರಡಿಸಿದೆ.
Kshetra Samachara
23/11/2020 02:24 pm