ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ ನನ್ನ ಕನಸು: ಶಾಸಕ ಅಮೃತ ದೇಸಾಯಿ

ಧಾರವಾಡ: ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಆರ್ಥಿಕ ವ್ಯವಸ್ಥೆ ಜಾಗತಿಕ ಮಟ್ಟದಲ್ಲಿ ಇಳಿಮುಖ ಕಂಡಿದೆ. ಆದರೂ ಮಕ್ಕಳಿಗೆ ತೊಂದರೆಯಾಗಬಾರದೆಂದು ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ವಿಶೇಷ ಅನುಮತಿ ಪಡೆದು ತಕ್ಷಣ ಕಾಮಗಾರಿ ಪ್ರಾರಂಭಿಸಲು ನಾನು ತಿಳಿಸಿದ್ದೇನೆ.ನನ್ನ ಮನವಿಗೆ ಸ್ಪಂದಿಸಿ ಶಾಲಾ ಕಟ್ಟಡಕ್ಕೆ ಅನುದಾನ ನೀಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನಿ ಎಂದು ಗ್ರಾಮೀಣ ಶಾಸಕ ಅಮೃತ ದೇಸಾಯಿ ಹೇಳಿದರು.

ಅವರು ಇಂದು ತಮ್ಮ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ನೀರಾವರಿ ನಿಗಮದಡಿಯಲ್ಲಿ ಎಸ್.ಸಿ ಕಾಲೋನಿಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಗಟಾರ ನಿರ್ಮಾಣ ಕಾಮಗಾರಿ ಮತ್ತು ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರ ಪ್ರಸ್ತಾವನೆ ಮೇರೆಗೆ ಕೋಲ್ ಇಂಡಿಯಾ ಲಿಮಿಟೆಡ್ ಸಿಎಸ್ ಆರ್ ಅನುದಾನದಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡು ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.

ಮುಖಂಡರಾದ ತವನಪ್ಪ ಅಷ್ಟಗಿ,ಶ್ರೀ ರುದ್ರಪ್ಪ ಅರಿವಾಳ, ಸಂತೋಷ್ ಪಾಟೀಲ, ಬಸವರಾಜ್ ಹೊಸುರ,ಸಂಬಾಜಿ ಜಾಧವ ಸೇರಿದಂತೆ ಇತರರು ಇದ್ದರು.

Edited By : Nagesh Gaonkar
Kshetra Samachara

Kshetra Samachara

23/11/2020 07:44 pm

Cinque Terre

30.87 K

Cinque Terre

1

ಸಂಬಂಧಿತ ಸುದ್ದಿ