ಹುಬ್ಬಳ್ಳಿ- ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರನ್ನು ನಾಮಕರಣ ಮಾಡಲು ಸಚಿವ ಸಂಪುಟದಲ್ಲಿ ಅನುಮೋದಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಶಿವಾನಂದ ಮುತ್ತಣ್ಣವರ ಮನವಿ ಮಾಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹೆಸರನ್ನಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಪತ್ರವನ್ನು ನೀಡಲಾಗಿತ್ತು ಈಗ ಕೇಂದ್ರ ಸರ್ಕಾರದ ಕಾರ್ಯಾಲಯದಿಂದ ಪತ್ರ ಬಂದಿದ್ದು ಇದನ್ನು ಮಾಜಿ ಸಚಿವರು ಎಂಟಿಬಿ ನಾಗರಾಜ್ ಹಾಗೂ ಈಶ್ವರಪ್ಪನವರು ಗಮನಕ್ಕೆ ತಂದಿದ್ದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರವನ್ನು ಕೊಟ್ಟಿದ್ದು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರನ್ನು ನಾಮಕರಣ ಮಾಡಲು ಸಚಿವ ಸಂಪುಟದಲ್ಲಿ ಅನುಮೋದಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಲ್ಲಿ ವಿನಂತಿಸಿಕೊಂಡಿದ್ದಾರೆ .
Kshetra Samachara
24/11/2020 06:33 pm