ಹುಬ್ಬಳ್ಳಿ: ಲೋಕೋಪಯೋಗಿ ಇಲಾಖೆಯ ಒಂದು ಕೋಟಿ ಅನುದಾನದಲ್ಲಿ ಶಿರೂರು ಪಾರ್ಕ್‌ನ ಮೂರು ಹಂತದ ಎಲ್ಲಾ ಒಳ ರಸ್ತೆಗಳ ಡಾಂಬರೀಕರಣಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೈಗಾರಿಕಾ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ಬೆಂಗಳೂರು ಹೊರತುಪಡಿಸಿ ದ್ವಿತೀಯ ಹಂತದ ನಗರಗಳಲ್ಲಿ ಕೈಗಾರಿಕೆ ಸ್ಥಾಪಿಸಲು ಪ್ರಯತ್ನಿಸುತ್ತಿದ್ದೇನೆ. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಕೈಗಾರಿಕೆಗಳು ಸ್ಥಾಪನೆಯಾಗಬೇಕು ಎಂಬ ಉದ್ದೇಶದಿಂದ ಬಂಡವಾಳ ಹೂಡಿಕೆದಾರರ ಮನ ಒಲಿಸುವ ಪ್ರಯತ್ನ ಮಾಡಿದ್ದೇನೆ. ಬೆಂಗಳೂರಿನಲ್ಲಿ 1,500 ಕೋಟಿ ರೂ. ಹೂಡಿಕೆ ಮಾಡಿ ಕೈಗಾರಿಕೆ ಸ್ಥಾಪನೆ ಮಾಡಲು ಬಂದ ಪ್ರತಿಷ್ಠಿತ ಕಂಪನಿಯ ಮುಖ್ಯಸ್ಥರೊಂದಿಗೆ ಖುದ್ದಾಗಿ ಮಾತನಾಡಿ, ಹುಬ್ಬಳ್ಳಿಯಲ್ಲಿ ಕೈಗಾರಿಕೆ ಸ್ಥಾಪನೆಗೆ ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆ ನೀಡಿದೆ. ಇದರ ಪರಿಣಾಮ ಕಂಪನಿಯವರು ಹುಬ್ಬಳ್ಳಿ ಹೂಡಿಕೆ ಮಾಡಲು ಮುಂದೆ ಬಂದಿದ್ದಾರೆ ಎಂದು ಹೇಳಿದರು.
Kshetra Samachara
24/11/2020 10:20 pm