ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಹುಬ್ಬಳ್ಳಿ ನಗರದಲ್ಲಿ 6 ಸಾವಿರ ಕೋಟಿ ಬಂಡವಾಳ ಹೂಡಿಕೆ'

ಹುಬ್ಬಳ್ಳಿ: ಪ್ರತಿಷ್ಠಿತ ಕಂಪನಿಗಳು ಹುಬ್ಬಳ್ಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಯ ಹಲವು ಭಾಗದಲ್ಲಿ 6 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಮಹಾನಗರ ಪಾಲಿಕೆ ಅನುದಾನದಲ್ಲಿ ಉದಯನಗರದ ಶಿವ ಗಣೇಶ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಭಾ ಭವನ ಉದ್ಘಾಟಿಸಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮ್ಮೇಳನದಲ್ಲಿ ಆದ ಒಡಂಬಡಿಕೆಯಂತೆ ಪ್ರತಿಷ್ಠಿತ ಕಂಪನಿಗಳು ಹೂಡಿಕೆಗೆ ಮುಂದಾಗಿದ್ದಾರೆ. ಇದರಿಂದಾಗಿ ಐ.ಟಿ., ಮೆಕಾನಿಕಲ್ ಇಂಜಿನಿಯರಿಂಗ್, ಎಫ್.ಎಂ.ಜಿ.ಸಿ ಸೇರಿ ಹಲವು ವಿಭಾಗಗಳಲ್ಲಿ ಉದ್ಯೋಗ ಅವಕಾಶಗಳು ಸೃಷ್ಠಿಯಾಗಲಿವೆ. ಜಿಲ್ಲೆಯ 20 ರಿಂದ 30 ಸಾವಿರ ಯುವಕರಿಗೆ ಸ್ಥಳೀಯವಾಗಿ ಉದ್ಯೋಗ ದೊರಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹುಬ್ಬಳ್ಳಿಯ ವಾರ್ಡ್ ನಂ 33ರ ಮಯೂರಿ ಎಸ್ಟೇಟ್‌ನಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆ ಕಾಮಗಾರಿಗೆ ಸಚಿವ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸಿದರು. ನಂತರ ಇಂದಿರಾ ನಗರ ರಸ್ತೆ ಕಾಮಗಾರಿಯನ್ನು ವೀಕ್ಷಿಸಿದರು.

Edited By : Vijay Kumar
Kshetra Samachara

Kshetra Samachara

24/11/2020 10:44 pm

Cinque Terre

51.62 K

Cinque Terre

9

ಸಂಬಂಧಿತ ಸುದ್ದಿ