ಧಾರವಾಡ : ಜಮೀನು ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ದಲಿತ ಲಮಾಣಿ ಕುಟುಂಬದ ಮೇಲೆ ದೌರ್ಜನ್ಯ ಮಾಡುತ್ತಿರುವುದನ್ನು ಖಂಡಿಸಿ, ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಲಮಾಣಿ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು.
ಜಿಲ್ಲೆಯ ಕಲಘಟಗಿ ತಾಲೂಕಿನ ಆಸ್ತಿಕಟ್ಟಿ ಗ್ರಾಮದ ದಲಿತ ಲಮಾಣಿ ಕುಟುಂಬದ ಮೇಲೆ ಬಮ್ಮಿಗಟ್ಟಿಯ ಕುಟುಂಬಸ್ಥರು ಹಲ್ಲೆ ಮಾಡುತ್ತಿದ್ದಾರೆ.
ಹೀಗಾಗಿ ಕುಟುಂಬಸ್ಥರ ಮೇಲೆ ನಡೆದ ಹಲ್ಲೆಯ ಕುರಿತು ದೂರು ನೀಡಲು ಹೋದರೆ, ಕಲಘಟಗಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆಂದು ಪ್ರತಿಭಟನಾಕಾರರು ಆರೋಪಿಸಿದರು.ಈ ಕೂಡಲೇ ಜಿಲ್ಲಾಧಿಕಾರಿಗಳು ಇದಕ್ಕೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
Kshetra Samachara
25/11/2020 06:58 pm