ಹುಬ್ಬಳ್ಳಿ: ಬೂತ್ ಮಟ್ಟದ ಭಾರತೀಯ ಜನತಾ ಪಕ್ಷದ ಬೆಂಬಲಿತ ಪದಾಧಿಕಾರಿಗಳಿಗೂ ಕೂಡ ನಾಯಕತ್ವ ನೀಡುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಶೇ 80%ರಷ್ಟು ಗೆಲುವನ್ನು ಸಾಧಿಸುವ ಕನಸನ್ನು ಬಿಜೆಪಿ ಹೊಂದಿದ್ದು,ಈ ನಿಟ್ಟಿನಲ್ಲಿ ಬಿಜೆಪಿ-ಕರ್ನಾಟಕ ಗ್ರಾಮ ಸ್ವರಾಜ್ಯ ಸಮಾವೇಶವನ್ನು ನಾಳೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹಾಗೂ ಶಾಸಕ ಅರವಿಂದ ಬೆಲ್ಲದ ಹೇಳಿದರು.
ನಗರದಲ್ಲಿಂದು ಸರ್ಕಿಟ್ ಹೌಸನಲ್ಲಿ ಜಂಟಿಯಾಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿಯಿಂದ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವ ಯೋಜಿತ ಕಾರ್ಯತಂತ್ರ,ಪ್ರಯತ್ನ, ಪ್ರವಾಸ ಮತ್ತು ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.ಬೂತ್ ಮಟ್ಟದಲ್ಲಿ ಬಿಜೆಪಿಯನ್ನು ಮತ್ತಷ್ಟು ಭದ್ರಪಡಿಸುವ ಚಿಂತನೆ ಪ್ರಧಾನಮಂತ್ರಿಗಳದ್ದಾಗಿದೆ ಎಂದರು.
ಈಗಾಗಲೇ ಗ್ರಾಮ ಪಂಚಾಯತಿ ಗೆಲುವಿಗೆ ಕಾರ್ಯತಂತ್ರ ರೂಪಿಸಿ ಕಾರ್ಯಯೋಜನೆಯನ್ನು ಕಾರ್ಯಗತಗೊಳಿಸಿದ್ದು,ನಾಳೆಯಿಂದ ಡಿಸೆಂಬರ್ 3ರ ವರೆಗೆ ಗ್ರಾಮಸ್ವರಾಜ್ಯ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.ರಾಜ್ಯದ ಆರು ಪ್ರಮುಖ ನಾಯಕರ ತಂಡಗಳು ರಾಜ್ಯದಲ್ಲಿ ಪ್ರವಾಸ ಮಾಡಲಿದೆ ಎಂದು ಅವರು ಹೇಳಿದರು.
Kshetra Samachara
26/11/2020 12:51 pm