ಹುಬ್ಬಳ್ಳಿ: ಶಾಸಕರಾದವರಿಗೆ ಸಚಿವರಾಗಬೇಕೆಂದ ಆಸೆ ಇರುತ್ತೆ. ಹೀಗಾಗಿ ಎಲ್ಲರೂ ಪೈಪೋಟಿ ಮಾಡುವರೇ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ ವಿಸ್ತರಣೆ ವಿಚಾರ ಬಂದಾಗ ಈ ರೀತಿ ಆಗುವುದು ಸಹಜ. ಸಚಿವ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ತಿಕ್ಕಾಟ ಹಿನ್ನೆಲೆಯಲ್ಲಿ ಮೂಲ ಬಿಜೆಪಿ ಮತ್ತು ವಲಸಿಗರ ನಡುವೆ ಭಿನ್ನಾಭಿಪ್ರಾಯವಿಲ್ಲ.
ಸಚಿವ ಸ್ಥಾನಕ್ಕಾಗಿ ಈ ರೀತಿಯ ಬೇರೆ ಬೇರೆ ರೀತಿಯ ಸ್ವರ ಬರುವುದು ಸಹಜ ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ಸಚಿವ ಸ್ಥಾನಕ್ಕಾಗಿ ಎಲ್ಲಾ ಶಾಸಕರಲ್ಲೂ ಆಸೆ ಇರುತ್ತದೆ. ಆದರೆ ನಮ್ಮ ಪಕ್ಷದಲ್ಲಿ ಲಾಬಿ ಮಾಡಬೇಕು ಎನ್ನುವ ಪರಿಸ್ಥಿತಿ ಇಲ್ಲ.ಪಕ್ಷದ ಹಿರಿಯರು ರಾಜ್ಯದ ಹಿತ ಕಾಪಾಡುವಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಇದೇ ಕನ್ನಡ ಪರ ಸಂಘಟನೆ ಕಾರ್ಯಕರ್ತರು ವಸೂಲಿಗೆ ಇಳಿದಿದ್ದಾರೆ ಎಂಬ ಹೇಳಿಗೆ ನಾನು ಈಗಲೂ ಬದ್ದ ಇದ್ದೇನೆ. ಅದನ್ನು ನಾನು ಸಾಬೀತು ಮಾಡುವ ಅವಶ್ಯಕತೆ ಇಲ್ಲ. ಅಂತವರು ಯಾರು ಅಂತ ಎಲ್ಲರಿಗೂ ಗೊತ್ತಿದೆ ಎಂದರು.
Kshetra Samachara
26/11/2020 01:58 pm