ಧಾರವಾಡ : ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರದ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ದೇಶದಲ್ಲಿ ಕಾರ್ಮಿಕರನ್ನು ಬಂಡವಾಳ ಶಾಹಿ ವರ್ಗ ಬಹಳಷ್ಟು ಶೋಷಣೆ ಮಾಡುತ್ತಿದ್ದಾರೆ. ಸರ್ಕಾರಗಳು ಸಹ ಉಳ್ಳವರ ಪರವಾದ ನೀತಿಗಳನ್ನು ರೂಪಿಸಿ ಅವರಿಗೆ ಲಾಭವನ್ನು ನೀಡುತ್ತಿವೆ ಇದು ಖಂಡನೀಯ ಹಲವಾರು ಕಾನೂನುಗಳನ್ನು ಜಾರಿಗೆ ತರಲು ಮುಂದಾಗಿದೆ.
ಅಂಬಾನಿ ಅದಾನಿ ಉದ್ಯಮಿಗಳ ಪರವಾಗಿ ಸರ್ಕಾರ ಕಾರ್ಮಿಕ ವಿರೋಧಿ ಕಾನೂನು ಜಾರಿಗೆ ತರುತ್ತಿರುವುದು ವಿಷಾದನೀಯ ಎಂದು ಎಸ್ ಯು ಸಿ ಐ ಕಮ್ಯುನಿಸ್ಟ್ ಪಕ್ಷದ ನಾಯಕ ರಾಮಾಂಜನಪ್ಪ ಆಲ್ದಳಿ ವಾಗ್ದಾಳಿ ನಡೆಸಿದರು.
ಪ್ರತಿಭಟನೆಯಲ್ಲಿ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ಸರ್ಕಾರದ ನೀತಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
26/11/2020 08:19 pm