ಧಾರವಾಡ: ಎಪಿಎಂಸಿ ಕಾಯ್ದೆ ಸೇರಿ ರೈತ ವಿರೋಧಿ ಕಾಯ್ದೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಿಂದಕ್ಕೆ ಪಡೆತುವಂತೆ ಆಗ್ರಹಿಸಿ, ಧಾರವಾಡದಲ್ಲಿ ಕಾರ್ಮಿಕ ಸಂಘಟನೆ, ರೈತ ಸಂಘಟನೆಗಳು ಜಂಟಿಯಾಗಿ ಪ್ರತಿಭಟನೆ ನಡೆಸಿದವು. ಅಲ್ಲಿಂದ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ಪ್ರತಿಭಟನಾಕಾರರು ಅಲ್ಲಿಯೂ ಪ್ರತಿಭಟನೆ ನಡೆಸಿದರು.
ನಗರದ ರೈಲ್ವೆ ಸ್ಟೇಷನ್ ರಸ್ತೆಯ ಮುಖ್ಯ ಅಂಚೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ, ರೈತರು ಹಾಗೂ ಕಾರ್ಮಿಕ ಸಂಘಟನೆಯ ಮುಖಂಡರು ರಾಜ್ಯ-ಕೇಂದ್ರ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಈಗಾಗಲೇ ದೇಶದಲ್ಲಿ ಕೊರೊನಾ ಮಹಾಮಾರಿಯಿಂದ ರೈತರು ತತ್ತರಿಸಿ ಹೋಗಿದ್ದಾರೆ. ಹೀಗಿದ್ದಾಗ ಜನರ ಅರ್ಥಿಕ ಸ್ಥತಿ ಸುಧಾರಿಸುವತ್ತ ಗಮನ ಹರಿಸಬೇಕಾದ ಸರ್ಕಾರಗಳು ರೈತವಿರೋಧಿ ಕಾನೂನುಗಳನ್ನು ತರುವಲ್ಲಿ ಹೆಚ್ಚು ಆಸಕ್ತಿ ತೋರಿಸುತ್ತಿದೆ. ರೈತರಿಗೆ ಎಪಿಎಂಸಿ ಕಾಯ್ದೆ, ಭೂಸುಧಾರಣಾ ಕಾಯ್ದೆಯು ಮರಣ ಶಾಸನವಾಗಿದ್ದು, ಈ ಕೂಡಲೇ ಈ ಕಾಯ್ದೆಗಳನ್ನು ಕೇಂದ್ರ ರಾಜ್ಯ ಸರ್ಕಾರಗಳು ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಅಗ್ರಹಿಸಿ ಪತ್ರಗಳನ್ನು ಅಂಚೆ ಮೂಲಕ ಕಳುಹಿಸುವ ಮೂಲಕ ಅಗ್ರಹಿಸಿದರು. ಇಲ್ಲವಾದಲ್ಲಿ ಉಗ್ರ ಹೋರಾಟಕ್ಕೆ ನಾವು ಅನಿಯಾಗಬೇಕಾಗುತ್ತದೆ ಎಂದು ಇದೇ ವೇಳೆ ಸರ್ಕಾರಗಳಿಗೆ ಎಚ್ಚರಿಕೆ ನೀಡುದರು.
Kshetra Samachara
27/11/2020 02:03 pm