ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ನಿವೃತ್ತ ನೌಕರರಿಗೆ ನೀಡಬೇಕಾದ ಪಿಂಚಣಿ ಸೌಲಭ್ಯದಲ್ಲಿನ ಮಲತಾಯಿ ಧೋರಣೆಯನ್ನು ಖಂಡಿಸಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿವೃತ್ತ ನೌಕರರು ಹುಬ್ಬಳ್ಳಿಯ ಕೇಂದ್ರ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯದ ಎಲ್ಲ ಸಾರಿಗೆ ಸಂಸ್ಥೆಗಳಲ್ಲಿಯೂ ಕೂಡ ನಿವೃತ್ತ ನೌಕರರ ಪಿಂಚಣಿಯನ್ನು ನೀಡಲಾಗಿದೆ.ಆದರೇ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಮಾತ್ರ ಮಲತಾಯಿ ಧೋರಣೆ ಅನುಸರಿಸುವ ಮೂಲಕ ನಿವೃತ್ತ ನೌಕರರ ಜೀವನದ ಜೊತೆ ಅಧಿಕಾರಿಗಳು ಆಟ ಆಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ನಾವು ಬೆವರು ಹರಿಸಿ ದುಡಿದ ನಮ್ಮಹಣವನ್ನು ನಮಗೆ ಕೊಡಿ ಇಲ್ಲವಾದರೇ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.ಇದೇ ವೇಳೆ ಸರ್ಕಾರದ ವಿರುದ್ಧ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
30/11/2020 02:20 pm