ಧಾರವಾಡ: ವೀರಶೈವ ಅಭಿವೃದ್ಧಿ ಮಂಡಳಿಯ ನಿರ್ದೇಶಕರಾಗಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಹಾಗೂ ನವಲಗುಂದ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಸೇರಿದಂತೆ ಒಟ್ಟು 11 ಜನರನ್ನು ಆಯ್ಕೆಯಾಗಿದ್ದಾರೆ.
ಮಂಡಳಿಯ ಅಧ್ಯಕ್ಷರನ್ನಾಗಿ ಪರಮಶಿವಯ್ಯ ಅವರನ್ನು ನೇಮಕ ಮಾಡಲಾಗಿದ್ದು, ವೀರಣ್ಣ ಚರಂತಿಮಠ, ಪ್ರಭಾಕರ್ ಕೋರೆ, ಹಾಲಪ್ಪ ಆಚಾರ್, ಸೊಗಡು ಶಿವಣ್ಣ, ಶಂಕರ ಪಾಟೀಲ್ ಮುನೇನಕೊಪ್ಪ, ಯು.ಬಿ.ಬಣಕಾರ, ಲಿಂಗಮೂರ್ತಿ ಹೊಸದುರ್ಗ, ಮಹಾಂತೇಶ ಪಾಟೀಲ್ ಹಾಗೂ ವಿಜಯಲಕ್ಷ್ಮೀ ಈಶ್ವರಪ್ಪ ಬಾಳೆಕುಂದ್ರಿ ಅವರನ್ನ ವೀರಶೈವ ಅಭಿವೃದ್ಧಿ ಮಂಡಳಿಯ ನಿರ್ದೇಶಕರಾಗಿ ನೇಮಕ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶ್ರೀಪತಿ ಪಿ.ಕೆ.ಯವರು ರಾಜ್ಯಪಾಲರ ಆದೇಶದ ಅನುಸಾರ ಆದೇಶ ಹೊರಡಿಸಿದ್ದಾರೆ.
Kshetra Samachara
30/11/2020 10:57 pm