ಹುಬ್ಬಳ್ಳಿ: ಎಸ್‌ಟಿ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆಂಬಲವಿಲ್ಲ. ಈ ಹೋರಾಟವನ್ನು ಹತ್ತಿಕ್ಕುವ ಕುತಂತ್ರ ಮಾಡುತ್ತಿದ್ದಾರೆ ಎಂದು ಕುರುಬರ ಎಸ್ ಟಿ ಹೋರಾಟ ಸಮಿತಿ ಧಾರವಾಡ ಜಿಲ್ಲಾ ಉಸ್ತುವಾರಿ, ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ಆರೋಪಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹೋರಾಟದ ಹಿಂದೆ ಬಿಜೆಪಿ ಮುಖಂಡ ಬಿ.ಎಲ್. ಸಂತೋಷ ಹಾಗೂ ಆರ್‌ಎಸ್‌ಎಸ್ ಕೈವಾಡವಿದೆ ಎಂದು ಆರೋಪಿಸುತ್ತಿದ್ದಾರೆ. ಇದು ಅತ್ಯಂತ ಬೇಜವಾಬ್ದಾರಿ ಹೇಳಿಕೆ. ರಾಜ್ಯದ ಕುರುಬ ಸಮುದಾಯ ಈ ಆರೋಪವನ್ನು ಖಂಡಿಸಿದೆ. ಮೀಸಲಾತಿ ಹೋರಾಟ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ ಅವರ ಹಿಂದೆ ಎಐಸಿಸಿ ನಾಯಕಿ ಸೋನಿಯಾ ಗಾಂಧಿ ಅವರ ಕೈವಾಡವಿದೆ ಎಂದು ಮುತ್ತಣ್ಣವರ ವಾಗ್ದಾಳಿ ನಡೆಸಿದರು.
ಜ. 15ರಂದು ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕಾಗಿನೆಲೆಯಿಂದ ಕುರುಬರಿಗೆ ಎಸ್‌ಟಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಪಾದಯಾತ್ರೆ ನಡೆಸಲಾಗುವುದು. ಬೆಂಗಳೂರಿನಲ್ಲಿ ಫೆ. 7ರಂದು ಬೃಹತ್ ಹೋರಾಟ ನಡೆಯಲಿದೆ ಎಂದರು.
Kshetra Samachara
03/12/2020 03:37 pm