ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕನ್ನಡ ಪರ ಸಂಘಟನೆಗಳಿಂದ ಮರಾಠಾ ನಿಗಮ ಸ್ಥಾಪನೆಗೆ ಬಾರಿ ವಿರೋಧ ವ್ಯಕ್ತವಾಗಿದ್ದು,ಹುಬ್ಬಳ್ಳಿಯಲ್ಲಿ ಕರವೇ ಕಾರ್ಯಕರ್ತರ ಪ್ರತಿಭಟನೆ ನಡೆಸುತ್ತಿರುವ ವೇಳೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಶಾಸಕ ಅರವಿಂದ ಬೆಲ್ಲದ ಹಾಗೂ ಬಸನಗೌಡ ಯತ್ನಾಳ ಪಾಟೀಲ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಲಾಯಿತು.ಇನ್ನೂ ಕರವೇಯ ಪ್ರವೀಣ್ ಶೆಟ್ಟಿ ಬಣದ ಮಂಜುನಾಥ್ ಲೂತಿಮಠ ನೇತೃತ್ವದ ಕಾರ್ಯಕರ್ತರ ಬಂಧನ ಮಾಡಿದ್ದು,ಸುಮಾರು 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧನ ಮಾಡಲಾಗಿದೆ.
Kshetra Samachara
05/12/2020 11:40 am