ಧಾರವಾಡ: ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವುದಕ್ಕೆ ಸಾಂಕೇತಿಕ ಬೆಂಬಲ ಸೂಚಿಸಿದ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ಮರಾಠಾ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನ ಮೀಸಲಿಟ್ಟು, ಕನ್ನಡಿಗರು ಹಾಗೂ ಕರ್ನಾಟಕದಲ್ಲಿರುವ ಮರಾಠಾ ಸಮುದಾಯದವರ ಮಧ್ಯೆ ಒಡಕು ಉಂಟು ಮಾಡುತ್ತಿದೆ. ಕೊರೊನಾ ಸಂದರ್ಭದಲ್ಲಿ ನೌಕರರಿಗೆ ಸಂಬಳ ಸಿಕ್ಕಿಲ್ಲ.
ಹೀಗಿರುವಾಗ ಪ್ರಾಧಿಕಾರ ರಚನೆ ಮಾಡಿ 50 ಕೋಟಿ ಅನುದಾನ ಮೀಸಲಿಡುವ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಜನತೆ ಕಂಗಾಲಾಗಿದ್ದಾರೆ. ಅವರ ನೆರವಿಗೆ ಬರದ ಸರ್ಕಾರ ಪ್ರಾಧಿಕಾರ ರಚನೆಗೆ ಕೋಟಿಗಟ್ಟಲೆ ಅನುದಾನ ನೀಡುತ್ತಿದೆ.
ಕೂಡಲೇ ಈ ಪ್ರಾಧಿಕಾರ ರಚನೆ ಕೆಲಸವನ್ನು ಕೈಬಿಡಬೇಕು ಎಂದು ಸಂಘಟನೆ ಕಾರ್ಯಕರ್ತರು ಒತ್ತಾಯಿಸಿದರು
Kshetra Samachara
05/12/2020 12:15 pm