ಧಾರವಾಡ: ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ ಅವರು ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದರು. ಈ ಬಂದ್ ಗೆ ಧಾರವಾಡದಲ್ಲಿ ಸ್ಪಂದನೆ ದೊರೆತಿಲ್ಲ. ಇದರ ಮಧ್ಯೆ ಪ್ರಾಧಿಕಾರಕ್ಕೆ 50 ಕೋಟಿ ಅನುದಾನವನ್ನು ಸರ್ಕಾರ ಮೀಸಲಿಟ್ಟಿದ್ದನ್ನು ಸ್ವಾಗತಿಸಿದ ಮರಾಠಾ ಸಮುದಾಯದ ಜನ ಧಾರವಾಡದ ಶಿವಾಜಿ ವೃತ್ತದಲ್ಲಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಮಾರ್ಲಾಪಣೆ ಮಾಡಿದ ಮರಾಠಾ ಸಮುದಾಯದ ಜನ, ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಪರಸ್ಪರ ಸಿಹಿ ತಿನ್ನಿಸುವ ಮೂಲಕ ವಿಜಯೋತ್ಸವ ಆಚರಿಸಿದರು.
ವಿಜಯೋತ್ಸವದ ಹಿನ್ನೆಲೆಯಲ್ಲಿ ಶಿವಾಜಿ ವೃತ್ತದ ಬಳ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಡಲಾಗಿತ್ತು.
Kshetra Samachara
05/12/2020 12:42 pm