ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ : ಡಿ.7 ರಂದು ಅಧಿಸೂಚನೆ ಪ್ರಕಟ ; ನಾಮಪತ್ರ ಸ್ವೀಕಾರ ಪ್ರಾರಂಭ

ಧಾರವಾಡ : ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯ ಪ್ರಯುಕ್ತ ಮಾದರಿ ನೀತಿ ಸಂಹಿತೆಯು ನವೆಂಬರ್ 30 ರಿಂದ ಡಿ.31ರ ಸಂಜೆ 5-00 ಘಂಟೆಯವರೆಗೆ ಜಾರಿಯಲ್ಲಿರುತ್ತದೆ. ಸದರಿ ನೀತಿ ಸಂಹಿತೆಯು ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ, ಹಾಗೂ ನಗರಪಾಲಿಕೆ ಮಹಾನಗರ ಪಾಲಿಕೆಗಳಿಗೆ ಅನ್ವಯಿಸುವುದಿಲ್ಲ. ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದಲ್ಲಿ ಅಪರ ಜಿಲ್ಲಾಧಿಕಾರಿಗಳು, ಧಾರವಾಡ ಇವರನ್ನು ಜಿಲ್ಲಾ ನೋಡಲ್ ಅಧಿಕಾರಿಗಳು ಎಂದು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು,ತಾಲೂಕ ಮಟ್ಟದಲ್ಲಿ ತಾಲ್ಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳೆಂದು ನೇಮಿಸಲಾಗಿರುತ್ತದೆ. ಸಾರ್ವಜನಿಕರು ಯಾವುದೇ ಚುನಾವಣೆ ಅಕ್ರಮ ಕಂಡುಬಂದಲ್ಲಿ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ವಿವರಿಸಿದರು.

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ನಾಮಪತ್ರವನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಅಭ್ಯರ್ಥಿಯು ಶೌಚಾಲಯ ಹೊಂದಿರುವ ಕುರಿತು ಪ್ರಮಾಣ ಪತ್ರ ಅಥವಾ ಮುಂದಿನ ಒಂದು ವರ್ಷದಲ್ಲಿ ಶೌಚಾಲಯ ಹೊಂದುವ ಕುರಿತು ಮುಚ್ಚಳಿಕೆ ಪತ್ರವನ್ನು ನೀಡುವುದು ಕಡ್ಡಾಯವಾಗಿದೆ ಎಂದು ಹೇಳಿದರು.

ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಮಾತನಾಡಿ, ಗ್ರಾಮಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸಿಬ್ಬಂದಿಗಳನ್ನು ನೇಮಿಸಿ ಬಂದೋಬಸ್ತ್ ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಂದು ಅವರು ಹೇಳಿದರು.

Edited By : Nagesh Gaonkar
Kshetra Samachara

Kshetra Samachara

05/12/2020 06:36 pm

Cinque Terre

45.84 K

Cinque Terre

0

ಸಂಬಂಧಿತ ಸುದ್ದಿ