ಧಾರವಾಡ: ನಗರದ ಹೊಸಯಲ್ಲಾಪೂರದ ಲಕಮನಹಳ್ಳಿ ಪ್ರದೇಶದಲ್ಲಿಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಸ್ವಚ್ಛ ಭಾರತ ಮಿಷನ್ ಯೋಜನೆಯ ಅನುದಾನ ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಅನುದಾನದಡಿಯಲ್ಲಿ ನಿರ್ಮಿಸಲಾಗಿರುವ ವೈಜ್ಞಾನಿಕ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಸಚಿವರಾದ ಜಗದೀಶ ಶೆಟ್ಟರ್ ಉದ್ಘಾಟಿಸಿದರು.
ನಂತರ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಮಾತನಾಡಿ,ಭಾರತ ಸರ್ಕಾರದ ಸ್ವಚ್ಛ ಭಾರತ ಮಿಷನ್ ಯೋಜನೆ ಹಾಗೂ ರಾಜ್ಯ ಸರ್ಕಾರದ ಅನುದಾನದಡಿ ನಿರ್ಮಿಸಲಾದ ವೈಜ್ಞಾನಿಕ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಪೂರಕವಾಗಿ ಈಗಾಗಲೇ ಸಂಗ್ರಹಗೊಂಡಿರುವ ಅವಳಿ ನಗರದ ತ್ಯಾಜ್ಯವನ್ನು ಬಳಸಿಕೊಂಡು ಹುಬ್ಬಳ್ಳಿಯ ಗಬ್ಬೂರ ಗ್ರಾಮ ಪ್ರದೇಶದಲ್ಲಿ ನೂತನ ವಿದ್ಯುತ್ ಉತ್ಪಾದನಾ ಘಟಕವನ್ನು ಎನ್‍ಟಿಪಿಸಿ ಯಿಂದ ಆರಂಭಿಸಲಾಗುವುದೆಂದು ಎಂದು ಹೇಳಿದರು.
ಈ ವೇಳೆ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜು,ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ,ಹುಧಾನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ್ ಕಲಬುರ್ಗಿ,ಜಿಲ್ಲಾಧಿಕಾರಿ ನಿತೇಶ್ ಪಾಟೀಲ,ಮಹಾನಗರ ಪಾಲಿಕೆಯ ಆಯುಕ್ತ ಡಾ: ಸುರೇಶ್ ಇಟ್ನಾಳ ಇದ್ದರು.
Kshetra Samachara
05/12/2020 09:37 pm