ಧಾರವಾಡ: ಧಾರವಾಡದಲ್ಲಿರುವ ಎನ್.ಎ.ಮುತ್ತಣ್ಣ ಪೊಲೀಸ್ ಮಕ್ಕಳ ವಸತಿ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಹಾಗೂ ಆ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಇಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸಿದ ಉಪವಾಸ ಸತ್ಯಾಗ್ರಹಕ್ಕೆ ಸರ್ಕಾರ ಮಣಿದಿದೆ.
ಸರ್ಕಾರ ಅಧಿಕೃತವಾಗಿ ಆದೇಶವೊಂದನ್ನು ಹೊರಡಿಸಿದ್ದು, ಈ ಎನ್.ಎ.ಮುತ್ತಣ್ಣ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ 2020-21ನೇ ಸಾಲಿನ ಬಾಕಿ ವೇತನವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದೆ.
Kshetra Samachara
05/12/2020 10:11 pm